ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರು ಸಾವನ್ನಪ್ಪಿದ್ದು, ದುರಂತದಲ್ಲಿ ಮೃತಪಟ್ಟವರಿಗೆ ಸರ್ಕಾರ ತಲಾ 5 ಲಕ್ಷ ಪರಿಹಾರ ಘೋಷಿಸಿದೆ.
ಮೃತರ ಕುಟುಂಬದವರಿಗೆ ತಲಾ 5 ಲಕ್ಷ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಸದನಕ್ಕೆ ಮಾಹಿತಿ ನೀಡಿದ್ದಾರೆ.
ಭಾರಿ ಮಳೆಯಿಂದಾಗಿ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿದ್ದು, ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದಾರೆ .
ಶಿರೂರು ಬಳಿ ಹೆದ್ದಾರಿಯಲ್ಲಿ ಮಳೆ ಅಬ್ಬರಕ್ಕೆ ಗುಡ್ಡ ಕುಸಿತ ಸಂಭವಿಸಿ 9 ಜನರು ನಾಪತ್ತೆಯಾಗಿದ್ದರು. ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು. 9 ಜನರಲ್ಲಿ 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ