alex Certify ಡೆಂಗ್ಯೂ ತಡೆಗೆ ಮಹತ್ವದ ಕ್ರಮ: ಗ್ರಾಪಂ ಕಾರ್ಯಪಡೆ ಸದಸ್ಯರಿಗೆ ಯೂಟ್ಯೂಬ್ ಆಧಾರಿತ ತರಬೇತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡೆಂಗ್ಯೂ ತಡೆಗೆ ಮಹತ್ವದ ಕ್ರಮ: ಗ್ರಾಪಂ ಕಾರ್ಯಪಡೆ ಸದಸ್ಯರಿಗೆ ಯೂಟ್ಯೂಬ್ ಆಧಾರಿತ ತರಬೇತಿ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಗ್ರಾಮ ಪಂಚಾಯಿತಿ ಕಾರ್ಯಪಡೆ(GPTF) ಸದಸ್ಯರಿಗೆ You Tube ಆಧಾರಿತ ತರಬೇತಿಯನ್ನು ಆಯೋಜಿಸಲಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಪ್ರಕರಣಗಳು ಹರಡುವುದನ್ನು ತಡೆಗಟ್ಟಲು ಗ್ರಾಮ ಪಂಚಾಯಿತಿಗಳು ಸೂಕ್ತ ಮುನ್ನಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಕಾರ್ಯಪಡೆಯ(GPTF) ಎಲ್ಲಾ ಸದಸ್ಯರಿಗೆ ಜು. 16ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ You Tube ತರಬೇತಿಯನ್ನು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ನಿರ್ದೇಶನದ ಮೇರೆಗೆ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ (ANSSIRD&PR) ಮೈಸೂರು ವತಿಯಿಂದ ಆಯೋಜಿಸಲಾಗಿದೆ.

You Tube ಲಿಂಕ್(https://www.youtube.com/live/fM4gaRpOKKE?si=sbQWLHueRUbSBk6S) ಬಳಸಿಕೊಂಡು ತರಬೇತಿಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ, ಗ್ರಾಮ ಪಂಚಾಯಿತಿ ಕಾರ್ಯಪಡೆಯ(GPTF) ಎಲ್ಲಾ ಸದಸ್ಯರು- ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮುಖ್ಯೋಪಾಧ್ಯಾಯರು ಹೀಗೆ ಎಲ್ಲಾ ಸದಸ್ಯರು ತಪ್ಪದೇ ಹಾಜರಾಗುವಂತೆ ಕೋರಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...