alex Certify BREAKING : ಅಕ್ಕಿ ಕಳ್ಳತನ ಪ್ರಕರಣ ; ಬಿಜೆಪಿ ಮುಖಂಡ ‘ಮಣಿಕಂಠ ರಾಠೋಡ್’ ಪೊಲೀಸ್ ವಶಕ್ಕೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅಕ್ಕಿ ಕಳ್ಳತನ ಪ್ರಕರಣ ; ಬಿಜೆಪಿ ಮುಖಂಡ ‘ಮಣಿಕಂಠ ರಾಠೋಡ್’ ಪೊಲೀಸ್ ವಶಕ್ಕೆ..!

ಕಲಬುರಗಿ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಶಹಾಪುರ ಪೊಲೀಸರ ಅಕ್ಕಿ ಕಳ್ಳತನ ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಬಂಧಿಸಿದ್ದಾರೆ. 2 ಕೋಟಿಗೂ ಹೆಚ್ಚು 6,077 ಕ್ವಿಂಟಾಲ್ ಅಕ್ಕಿ ಕಳ್ಳತನ ಪ್ರಕರಣದಲ್ಲಿ ಕಲಬುರಗಿಯಲ್ಲಿ ಅವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ಸರ್ಕಾರಿ ಗೋದಾಮಿನಲ್ಲಿ ಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಇದೀಗ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಶಹಾಪುರದಲ್ಲಿ ಇತ್ತೀಚೆಗೆ ಅನ್ನಭಾಗ್ಯ ಪಡಿತರ ಅಕ್ಕಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ದಂಧೆಕೋರರು ಯಾವುದೇ ಭಯವಿಲ್ಲದೇ ರಾಜಾರೋಷವಾಗಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಿಸುತ್ತಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...