ನವದೆಹಲಿ: ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡುವ ಅವಕಾಶ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡುವ ಅಧಿಕಾರ ಕೇವಲ ಸಂಸತ್ತಿನಲ್ಲಿ ರಚಿಸಲಾಗುವ ಕಾನೂನುಗಳಿಗೆ ಮಾತ್ರವೇ ಇರುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಬಿಹಾರ ಸರ್ಕಾರ 2015ರಲ್ಲಿ ಅತ್ಯಂತ ಹಿಂದುಳಿದ ಜಾತಿ ಪಟ್ಟಿಯಿಂದ ತಂತಿ ತಂತ್ವಾ ಜಾತಿಯನ್ನು ತೆಗೆದು ಪರಿಶಿಷ್ಟ ಜಾತಿ ಪಟ್ಟಿಯಲ್ಲಿದ್ದ ಪಾನ್ ಸವಾಸಿಯೊಂದಿಗೆ ಸೇರಿಸಿತ್ತು. ಇದನ್ನು ಸುಪ್ರೀಂ ಕೋರ್ಟ್ ಪೀಠ ತಿರಸ್ಕರಿಸಿದೆ. ಪರಿಶಿಷ್ಟ ಜಾತಿ ಪಟ್ಟಿ ಬದಲಾವಣೆ ಅಧಿಕಾರ ರಾಜ್ಯಗಳಿಗೆ ಇಲ್ಲ, ಕೇಂದ್ರಕ್ಕೆ ಮಾತ್ರ ಇದೆ ಎಂದು ತಿಳಿಸಿದೆ.