BREAKING : ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್ ; ಕೊಲೆ ಪ್ರಕರಣದಲ್ಲಿ ಚಲನಚಿತ್ರ ನಿರ್ದೇಶಕ ಅರೆಸ್ಟ್..!

ಬೆಂಗಳೂರು : ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್ ಎದುರಾಗಿದ್ದು, ಕೊಲೆ ಪ್ರಕರಣದಲ್ಲಿ ಚಲನಚಿತ್ರ ನಿರ್ದೇಶಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆ ನಡೆದು ಬರೋಬ್ಬರಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಿರ್ದೇಶಕ ಗಜೇಂದ್ರ ಅಲಿಯಾಸ್ ಗಜನನ್ನು ಬಂಧಿಸಿದ್ದಾರೆ.

ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರೌಡಿಶೀಟರ್ ಕೊತ್ತ ರವಿ ಕೊಲೆಯಲ್ಲಿ ಈತ 18 ನೇ ಆರೋಪಿ ಆಗಿದ್ದನು. ಕೋರ್ಟ್ ಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ತಲೆಮರೆಸಿಕೊಂಡು ಎಸ್ಕೇಪ್ ಆಗಿದ್ದನು. ಬರೋಬ್ಬರಿ 20 ವರ್ಷದ ಬಳಿಕ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾನೆ. ತಪ್ಪು ಮಾಡಿದವನು ಕಾನೂನಿಗೆ ಮಣ್ಣೆರೆಚುವುದಕ್ಕೆ ಸಾಧ್ಯವಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಈತ ರುದ್ರ, ಪುಟಾಣಿ ಪವರ್ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದು, ಅಲ್ಲದೇ ತಮಿಳಿನಲ್ಲಿ ಕೂಡ ಸಿನಿಮಾ ಮಾಡಿದ್ದಾನೆ. ಸದ್ಯ, ಸಿಸಿಬಿ ಪೊಲೀಸರು ಈತನನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಡಿ ಗ್ಯಾಂಗ್ ಸದ್ಯ ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read