ಬೆಂಗಳೂರು : ಕನ್ನಡಿಗರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಖಾಸಗಿ ಕಂಪನಿಗಳಲ್ಲಿ ಶೇ.50-75ರಷ್ಟು ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ಸಂಪುಟ ಅನುಮೋದನೆ ನೀಡಿದೆ.
ಈ ಬಗ್ಗೆ ಸಚಿವ ಸಂತೋಷ್ ಲಾಡ್ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ವಿಷಯವನ್ನು ನಿಮ್ಮೆಲ್ಲರಲ್ಲಿ ಹಂಚಿಕೊಳ್ಳಲು ಖುಷಿಯಾಗುತ್ತಿದೆ. ಈ ವಿಧೇಯಕದ ಜಾರಿಯಿಂದ ರಾಜ್ಯದಲ್ಲಿರುವ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 75ರ ವರೆಗೆ ಮೀಸಲಾತಿ ಸಿಗಲಿದೆ ಎಂದು ಹೇಳಿದ್ದಾರೆ.
ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ವಿಧೇಯಕಕ್ಕೆ ಸಂಪುಟದ ಅಂಗೀಕಾರ ಸಿಕ್ಕಿದೆ. ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾದ ವಿಷಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ತುಂಬ ಖುಷಿಯಾಗುತ್ತಿದೆ. ಈ ವಿಧೇಯಕದಿಂದ ಶೇ 50 ರಷ್ಟು ಮ್ಯಾನೇಜ್ ಮೆಂಟ್ ಹುದ್ದೆಗಳು ಹಾಗೂ ಶೇ 75 ರಷ್ಟು ನಾನ್ ಮ್ಯಾನೇಜ್ ಮೆಂಟ್ ಹುದ್ದೆಗಳಲ್ಲಿ ಸ್ಥಳಿಯರಿಗೆ ಮೀಸಲಾತಿ ಸಿಗಲಿದೆ.
ಕರ್ನಾಟಕದಲ್ಲಿ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷದಿಂದ ವಾಸಿಸುತ್ತಿರುವವರು, ಕನ್ನಡ ಭಾಷೆಯಲ್ಲಿ ಮಾತಾಡಲು, ಓದಲು ಹಾಗೂ ಬರೆಯಲು ಬರುವವರು ಅಲ್ಲದೇ ನೋಡಲ್ ಏಜೆನ್ಸಿಗಳು ನಡೆಸುವ ಕನ್ನಡ ಭಾಷಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವವರು ಈ ಮೀಸಲಾತಿಗೆ ಅರ್ಹರಿರಲಿದ್ದಾರೆ. ಈ ನಿಯಮಗಳನ್ನು ಉಲ್ಲಂಘಿಸುವ ಸಂಸ್ಥೆಗಳಿಗೆ ದಂಡ ವಿಧಿಸುವ ಅಂಶವನ್ನು ಸಹ ವಿಧೇಯಕದಲ್ಲಿ ಸೇರಿಸಲಾಗಿದ್ದು, ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ಸಚಿವ ಸಂತೋಷ್ ಲಾಡ್ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.