alex Certify ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ H.D ರೇವಣ್ಣಗೆ ಗಾಯ, ಆಸ್ಪತ್ರೆಗೆ ದಾಖಲು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ H.D ರೇವಣ್ಣಗೆ ಗಾಯ, ಆಸ್ಪತ್ರೆಗೆ ದಾಖಲು..!

ಬೆಂಗಳೂರು : ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರು ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ಆಗಮಿಸಿದ್ದ ವೇಳೆ ಕಾಲು ಜಾರಿ ಬಿದ್ದಿದ್ದಾರೆ. ಪರಿಣಾಮ ಅವರ ಪಕ್ಕೆಲುಬಿಗೆ ಪೆಟ್ಟಾಗಿದ್ದು, ಸದ್ಯ ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಏಕಾದಶಿ ಪ್ರಯುಕ್ತ ಅವರು ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಸಲ್ಲಿಸಿ ವಾಪಸ್ ಆಗುವಾಗ ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...