ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮನೆಯೂಟ, ಹಾಸಿಗೆ, ಪುಸ್ತಕಕ್ಕೆ ಬೇಡಿಕೆಯಿಟ್ಟು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಾಳೆ (ಜು.18) ರಂದು ನಡೆಯಲಿದೆ. ನಟ ದರ್ಶನ್ ಗೆ ಮನೆಯೂಟ ಸಿಗುತ್ತಾ..? ಅಥವಾ ಜೈಲೂಟವೇ ಖಾಯಂ ಆಗುತ್ತಾ ಎಂಬುದು ನಾಳೆ ತೀರ್ಮಾನವಾಗಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಮನೆಯಿಂದ ಊಟ, ಹಾಸಿಗೆ. ಪುಸ್ತಕ ತರಿಸಿಕೊಳ್ಳಲು ಅನುಮತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು.
ಬೇರೆ ಪ್ರಕರಣಗಳಂತೆಯೇ ಇದನ್ನೂ ಪರಿಗಣಿಸಲಾಗುವುದು. ಕಾನೂನಿನ ಅನುಸಾರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿ ಕೃಷ್ಣಕುಮಾರ್ ಅಭಿಪ್ರಾಯಪಟ್ಟಿದ್ದರು. ನಾಳೆ ಕೋರ್ಟ್ ಈ ಬಗ್ಗೆ ತೀರ್ಪು ಪ್ರಕಟಿಸಲಿದೆ.