HomeIndiaದೆಹಲಿ ವಿಮಾನ ನಿಲ್ದಾಣದಲ್ಲಿ ಹೃದಯಾಘಾತಕ್ಕೆ ಒಳಗಾದ ವ್ಯಕ್ತಿ ಜೀವ ಉಳಿಸಿದ ವೈದ್ಯೆ | ವಿಡಿಯೋ ವೈರಲ್

ದೆಹಲಿ ವಿಮಾನ ನಿಲ್ದಾಣದಲ್ಲಿ ಹೃದಯಾಘಾತಕ್ಕೆ ಒಳಗಾದ ವ್ಯಕ್ತಿ ಜೀವ ಉಳಿಸಿದ ವೈದ್ಯೆ | ವಿಡಿಯೋ ವೈರಲ್

ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಹೃದಯಾಘಾತಕ್ಕೆ ಒಳಗಾದ ವ್ಯಕ್ತಿಯೊಬ್ಬರಿಗೆ ಮಹಿಳಾ ವೈದ್ಯರೊಬ್ಬರು ಪುನಶ್ಚೇತನ ನೀಡಿ ಜೀವ ಉಳಿಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆದ ನಂತರ ವೈದ್ಯೆಯ ಪ್ರಯತ್ನ ಮತ್ತು ತ್ವರಿತ ಪ್ರತಿಕ್ರಿಯೆ ಬಗ್ಗೆ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಪ್ರಶಂಸೆ ವ್ಯಕ್ತವಾಗಿದೆ.

ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಘಟನೆ ಸಂಭವಿಸಿದ ಸಮಯದಲ್ಲಿ ಮಹಿಳಾ ವೈದ್ಯೆ ನೋಡುಗರ ಗುಂಪಿನ ನಡುವೆ ಅಸ್ವಸ್ಥ ವ್ಯಕ್ತಿಯ ಎದೆಯನ್ನು ಪಂಪ್ ಮಾಡುವುದನ್ನು ಕಾಣಬಹುದು.

ದೃಶ್ಯಗಳ ಪ್ರಕಾರ, ವೈದ್ಯರು ರೋಗಿಯನ್ನು 5 ನಿಮಿಷಗಳಲ್ಲಿ ಪುನರುಜ್ಜೀವನಗೊಳಿಸಿದರು ಮತ್ತು ಅವರು ಪ್ರಜ್ಞೆಯನ್ನು ಮರಳಿ ಪಡೆಯುವವರೆಗೂ ಅವರ ಪ್ರಯತ್ನ ಮುಂದುವರೆಸಿದ್ದಾರೆ. ನಂತರ ವಿಮಾನ ನಿಲ್ದಾಣದ ಅಧಿಕಾರಿಗಳು ವ್ಯಕ್ತಿಗೆ ವೈದ್ಯಕೀಯ ಚಿಕಿತ್ಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈದ್ಯರ ಗುರುತು ಇನ್ನೂ ಪತ್ತೆಯಾಗದಿದ್ದರೂ, ಸಾಮಾಜಿಕ ಮಾಧ್ಯಮ ಬಳಕೆದಾರರು ಆಕೆಯ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular