HomeAgricultureರೈತರಿಗೆ ಭೂಮಿ ಇದ್ದ ಮಾತ್ರಕ್ಕೆ ಶೂನ್ಯ ಬಡ್ಡಿ ಸಾಲ ಕೊಡಲ್ಲ: ಸಚಿವ ರಾಜಣ್ಣ ಸ್ಪಷ್ಟನೆ

ರೈತರಿಗೆ ಭೂಮಿ ಇದ್ದ ಮಾತ್ರಕ್ಕೆ ಶೂನ್ಯ ಬಡ್ಡಿ ಸಾಲ ಕೊಡಲ್ಲ: ಸಚಿವ ರಾಜಣ್ಣ ಸ್ಪಷ್ಟನೆ

ಬೆಂಗಳೂರು: ರೈತರು ಹೊಂದಿರುವ ಭೂಮಿ ಬೆಳೆಯುವ ಬೆಳೆ ಆಧರಿಸಿ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುವುದು. ಕೇವಲ ಭೂಮಿ ಇದ್ದ ಮಾತ್ರಕ್ಕೆ 5 ಲಕ್ಷ ರೂ. ಬೆಳೆ ಸಾಲ ನೀಡುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ.

ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಭೂಮಿ ಇದ್ದ ಮಾತ್ರಕ್ಕೆ ಸಾಲ ಕೊಡುವುದಿಲ್ಲ. ಬೆಳೆಯುವ ಬೆಳೆ, ರೈತರು ಹೊಂದಿರುವ ಭೂಮಿ ಆಧರಿಸಿ ಸಾಲ ನೀಡಲಾಗುವುದು ಎಂದು ಹೇಳಿದ್ದಾರೆ.

2024 -25 ನೇ ಸಾಲಿನಲ್ಲಿ 35.10 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 25,000 ಕೋಟಿ ರೂ. ಸಾಲ ಅಲ್ಪಾವಧಿ ಕೃಷಿ ಸಾಲ ಮತ್ತು ಪಶು ಸಂಗೋಪನೆಗೆ ದುಡಿಯುವ ಬಂಡವಾಳ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular