alex Certify BIG NEWS : ದೇಶದ ಜನತೆಗೆ ಗುಡ್ ನ್ಯೂಸ್ ; ಕೇಂದ್ರದಿಂದ ‘ಗರೀಬ್ ಕಲ್ಯಾಣ ಅನ್ನಭಾಗ್ಯ ಯೋಜನೆ’ 5 ವರ್ಷ ವಿಸ್ತರಣೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ದೇಶದ ಜನತೆಗೆ ಗುಡ್ ನ್ಯೂಸ್ ; ಕೇಂದ್ರದಿಂದ ‘ಗರೀಬ್ ಕಲ್ಯಾಣ ಅನ್ನಭಾಗ್ಯ ಯೋಜನೆ’ 5 ವರ್ಷ ವಿಸ್ತರಣೆ..!

ಕೇಂದ್ರ ಸರ್ಕಾರ ‘ಗರೀಬ್ ಕಲ್ಯಾಣ ಅನ್ನಭಾಗ್ಯ ಯೋಜನೆ’ 5 ವರ್ಷ ವಿಸ್ತರಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ದೇಶದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಐದು ವರ್ಷಗಳವರೆಗೆ ವಿಸ್ತರಿಸಲಾಗಿದೆ ಎಂದಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮಂಗಳವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಐದು ವರ್ಷಗಳ ಅವಧಿಗೆ ವಿಸ್ತರಿಸಲು ಅನುಮೋದನೆ ನೀಡಿದೆ.ಭಾರತ್ ಅಕ್ಕಿ ಕೆಜಿಗೆ 29 ರೂ ಬೆಲೆಯಲ್ಲಿ ಸಿಗುತ್ತಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು.

ಕೋವಿಡ್ ಕಾಲದಲ್ಲಿ ಬಡವರ ಹಸಿವು ನೀಗಿಸಿದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಬಗ್ಗೆ ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ ಐಎಂಎಫ್ ಶ್ಲಾಘಿಸಿತ್ತು. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬಡವರಿಗೆ ಆಹಾರ ಒದಗಿಸುವ ಮೂಲಕ ಕಡುಬಡತನದಿಂದ ದೇಶವಾಸಿಗಳನ್ನು ಪಾರು ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಿತ್ತು. ವರದಿಯ ಪ್ರಕಾರ ಭಾರತದಲ್ಲಿ ದಿನಕ್ಕೆ 142 ರೂಪಾಯಿಗಿಂತ ಕಡಿಮೆ ಸರಾಸರಿ ಆದಾಯ ಇರುವ ಕಡುಬಡವರ ಸಂಖ್ಯೆ ಕೊರೋನಾ ಬಿಕ್ಕಟ್ಟಿನ 2020ರ ವರ್ಷದಲ್ಲಿಯೂ ಕೊರೋನಾ ಪೂರ್ವ 2019ರ ಮಟ್ಟದಲ್ಲಿ ಉಳಿದುಕೊಂಡಿದೆ. ಗರೀಬ್ ಕಲ್ಯಾಣ ಯೋಜನೆ ಬಡತನವನ್ನು ದೂರ ಮಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...