HomeKarnatakaBIG NEWS: ಪ್ರವಾಸೋದ್ಯಮ ಇಲಾಖೆ ಹಣ ಅಕ್ರಮ ವರ್ಗಾವಣೆ: ಪ್ರಕರಣದ ಕಿಂಗ್ ಪಿನ್ ಅರೆಸ್ಟ್

BIG NEWS: ಪ್ರವಾಸೋದ್ಯಮ ಇಲಾಖೆ ಹಣ ಅಕ್ರಮ ವರ್ಗಾವಣೆ: ಪ್ರಕರಣದ ಕಿಂಗ್ ಪಿನ್ ಅರೆಸ್ಟ್

ಬಾಗಲಕೋಟೆ: ಬಾಗಲಕೋಟೆಯಲ್ಲಿ ನಡೆದಿದ್ದ ಪ್ರವಾಸೋದ್ಯಮ ಇಲಾಖೆಯ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಐಡಿಬಿಐ ಬ್ಯಾಂಕ್ ಸೇಲ್ಸ್ ಎಕ್ಸಿಕ್ಯೂಟಿವ್ ಸೂರಜ್ ಸಾಗರ್ ಬಂಧಿತ ಆರೋಪಿ. ಈತ ಪ್ರವಾಸೋದ್ಯಮ ಇಲಾಖೆ ಖಾತೆಯ ಮೂರು ಖಾತೆಗಳಿಂದ 2,47,73,999 ರೂ ಗಳನ್ನು ಸ್ನೇಹಿತರು, ಸಂಬಂಧಿಕರ ಖಾತೆಗೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದ. 2021-2024ರವರೆಗೆ ಒಟ್ಟು 54 ಬಾರಿ ಹಣ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ.

ಈ ಹಗರಣದಲ್ಲಿ ಬ್ಯಾಂಕ್ ನ ಇತರ ಕೆಲ ಸಿಬ್ಬಂದಿಗಳು ಹಾಗೂ ಇಲಾಖೆಯ ಕೆಲ ಅಧಿಕಾರಿಗಳೂ ಭಾಗಿಯಾಗಿರುವ ಶಂಕೆ ಇದ್ದು, ಬಾಗಲಕೋಟೆ ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular