HomeKarnatakaBREAKING : ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ; ಮತ್ತೆ 14...

BREAKING : ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ; ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು, 14  ದಿನ  ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಬಂಧನವಾಗಿದ್ದು, ಇಂದು ಅವರ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿತ್ತು. ಈ ಹಿನ್ನೆಲೆ ಬೆಂಗಳೂರಿನ 24 ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲದ ನಟ ದರ್ಶನ್ ರನ್ನು ಪೊಲೀಸರು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ.  ಆಗಸ್ಟ್ 1 ರವರೆಗೆ ನಟ ದರ್ಶನ್ & ಗ್ಯಾಂಗ್ ಗೆ ಪರಪ್ಪನ ಅಗ್ರಹಾರ ಫಿಕ್ಸ್ ಆಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ 1 ತಿಂಗಳು ಕಳೆದಿದ್ದು, ಜೈಲಿನಲ್ಲಿ ದಾಸ ಚಡಪಡಿಸುತ್ತಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೂನ್ 11 ರಂದು ಬಂಧನಕ್ಕೊಳಗಾಗಿದರು. ಅಂದಿನಿಂದ ಇಂದಿನವರೆಗೂ ದರ್ಶನ್ ಸೆರೆಮನೆ ವಾಸ ಅನುಭವಿಸುತ್ತಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ನಟ ದರ್ಶನ್ & ಗ್ಯಾಂಗ್ ಬರ್ಬರವಾಗಿ ಕೊಂದಿದೆ ಎಂಬ ಆರೋಪವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular