ನವದೆಹಲಿ: ಉತ್ತರ ಪ್ರದೇಶದ ಗೊಂಡಾದಲ್ಲಿ ದಿಬ್ರುಘರ್ ಎಕ್ಸ್ಪ್ರೆಸ್ ನ 15 ಬೋಗಿಗಳು ಹಳಿ ತಪ್ಪಿದ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಅಪಘಾತದ ಸುದ್ದಿ ತಿಳಿದ ಕೂಡಲೇ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ತಲುಪಿದರು. ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ರೈಲು ಚಂಡೀಗಢದಿಂದ ಬರುತ್ತಿತ್ತು. ಜಿಲಾಹಿ ರೈಲ್ವೆ ನಿಲ್ದಾಣ ಮತ್ತು ಗೋಸಾಯಿ ದಿಹ್ವಾ ನಡುವೆ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.