ನವದೆಹಲಿ: ಗುರುವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಅಸ್ಸಾಂ ಸರ್ಕಾರವು ಆಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯ್ದೆ ಮತ್ತು ನಿಯಮಗಳು 1935 ಅನ್ನು ರದ್ದುಗೊಳಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಬಾಲ್ಯ ವಿವಾಹದ ವಿರುದ್ಧ ಹೆಚ್ಚುವರಿ ಸುರಕ್ಷತೆಗಳ ಮೂಲಕ ನಮ್ಮ ಸಹೋದರಿಯರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ನಾವು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದೇವೆ. ಇಂದು ನಡೆದ ಅಸ್ಸಾಂ ಕ್ಯಾಬಿನೆಟ್ ಸಭೆಯಲ್ಲಿ ನಾವು ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯಿದೆ ಮತ್ತು 1935 ರ ನಿಯಮಗಳು ರದ್ದುಗೊಳಿಸುವ ಮಸೂದೆ 2024 ರ ಪ್ರಕಾರ ರದ್ದುಗೊಳಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಮದುವೆ ಮತ್ತು ವಿಚ್ಛೇದನದ ನೋಂದಣಿಯಲ್ಲಿ ಸಮಾನತೆಯನ್ನು ತರಲು, ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ನೋಂದಣಿ ಕಾಯ್ದೆ 1935 ಮತ್ತು ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ನಿಯಮಗಳನ್ನು ರದ್ದುಗೊಳಿಸುವ ಗುರಿಯನ್ನು ಹೊಂದಿರುವ ಅಸ್ಸಾಂ ರದ್ದತಿ ಮಸೂದೆ 2024 ಗೆ ರಾಜ್ಯ ಸಚಿವ ಸಂಪುಟವು ಅನುಮೋದನೆ ನೀಡಿದೆ. ಅಸ್ಸಾಂ ವಿಧಾನಸಭೆಯ ಮುಂದಿನ ಮಾನ್ಸೂನ್ ಅಧಿವೇಶನದ ಮೊದಲು ಮಸೂದೆಯನ್ನು ಪರಿಗಣನೆಗೆ ಇಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.