HomeKarnatakaಡಾ. ಪ್ರಭಾ ಮಲ್ಲಿಕಾರ್ಜುನ್, ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ ಗೆ ಅರ್ಜಿ

ಡಾ. ಪ್ರಭಾ ಮಲ್ಲಿಕಾರ್ಜುನ್, ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಆಯ್ಕೆಯಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಹಾಸನ ಕ್ಷೇತ್ರದಿಂದ ಚುನಾಯಿತರಾಗಿರುವ ಶ್ರೇಯಸ್ ಪಟೇಲ್ ಅವರ ಆಯ್ಕೆಯ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಪ್ರತ್ಯೇಕ ಚುನಾವಣಾ ತಕರಾರು ಅರ್ಜಿ ಸಲ್ಲಿಸಲಾಗಿದೆ.

ಶ್ರೇಯಸ್ ಪಟೇಲ್ ಆಯ್ಕೆಯ ಅಸಿಂಧು ಕೋರಿ ವಕೀಲ ಜಿ. ದೇವರಾಜೇಗೌಡ ಪುತ್ರ ಡಿ. ಚರಣ್ ಗೌಡ ಅರ್ಜಿ ಸಲ್ಲಿಸಿದ್ದಾರೆ. ಶ್ರೇಯಸ್ ಪಟೇಲ್ ಚುನಾವಣೆ ವೇಳೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಮ್ಮ ಆಸ್ತಿಗಳನ್ನು ವಿವರಗಳನ್ನು ಪ್ರಾಮಾಣಿಕವಾಗಿ ನಮೂದಿಸಿಲ್ಲ. 5 ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಿಲ್ಲ ಎಂದು ತಕರಾರು ಎತ್ತಲಾಗಿದೆ.

ಡಾ. ಪ್ರಭಾ ಮಲ್ಲಿಕಾರ್ಜುನ ಆಯ್ಕೆ ಅಸಿಂಧು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯತ್ರಿ ಸಿದ್ದೇಶ್ವರ ಅರ್ಜಿ ಸಲ್ಲಿಸಿದ್ದಾರೆ. ಮತದಾರರಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡುಗಳನ್ನು ವಿತರಿಸುವ ಮೂಲಕ ವರ್ಷಕ್ಕೆ 1 ಲಕ್ಷ ರೂ. ಕೊಡುವ ಭರವಸೆ ನೀಡಿದ್ದಾರೆ. ಇದು ಪ್ರಚಾರ ಪ್ರತಿನಿಧಿ ಕಾಯ್ದೆಯ ವಿರುದ್ಧವಾಗಿದೆ. ಅವರ ಆಯ್ಕೆಯನ್ನು ಅಸಿಂಧುವೆಂದು ಘೋಷಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುರುವಾರ ಈ ಅರ್ಜಿಗಳು ಸಲ್ಲಿಕೆಯಾಗಿದ್ದು, ದಸ್ತಾವೇಜು ಕಚೇರಿಯಲ್ಲಿ ಪರಿಶೀಲನೆಗೆ ಒಳಗಾದ ಬಳಿಕ ವಿಚಾರಣೆಗೆ ನಿಗದಿಯಾಗಬೇಕಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular