ಜೈಪುರ: ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬಿಕಾನೇರ್ ನಲ್ಲಿ ನಡೆದಿದೆ.
ಬಿಕಾನೇರ್ ನ ಮಹಾಜನ್ ಜೈತ್ ಪುರ ಟೋಲ್ ಬಳಿ ಈ ಅಪಘಾತ ಸಂಭವಿಸಿದೆ. ಮೃತರು ಹನುಮಾನ್ ಗಢದ ದಬ್ವಾಲಿ ನಿವಾಸಿಗಳು ಎಂದು ತಿಳಿದುಬದಿದೆ.
ಮೃತರನ್ನು ಆರತಿ, ದುಬ್ಬು, ಭೂಮಿಕಾ, ನೀರಜ್ ಕುಮಾರ್ ಹಾಗೂ ಶಿವಕುಮಾರ್ ಎಂದು ಗುರುತಿಸಲಾಗಿದೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದ ವೇಳೆ ಇಬ್ಬರು ಕಾರಿನಿಂದ ಹೊರಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದವರು ಆಸ್ಪತ್ರೆಗೆ ಸೇರಿಸುವ ವೇಳೆ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಮಹಾಜನ್ ಪೊಲೀಸರು, ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.