
ಕಾರವಾರ: ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಸಭವಿಸಿತ್ತು. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಹತ್ತು ಜನರು ಸಾವನ್ನಪ್ಪಿದ್ದು, ಈವರೆಗೆ 8 ಜನರ ಮೃತದೇಹ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.
ರಸ್ತೆಯಲ್ಲಿ ಬಿದ್ದಿರುವ ಮಣ್ಣು ತೆರವು ಕಾರ್ಯಾಚರಣೆ ಮುಂದುವರೆದಿದೆ. ನದಿಯಲ್ಲಿ ಕೊಚ್ಚಿ ಹೋಗಿರುವ ಗ್ಯಾಸ್ ಟ್ಯಾಂಕರ್ ನಿಂದ ಅನಿಲ ಹೊರತೆಗೆಯಲಾಗುತ್ತಿದೆ. ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಾಚರಣೆ ವಿಳಂಬವಾಗುತ್ತಿದೆ ಎಂದು ತಿಳಿಸಿದ್ದಾರೆ.
ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದಿಂದಾಗಿ ರಸ್ತೆಬದಿಯಲ್ಲಿದ್ದ ಟೀ ಅಂಗಡಿ ಸಂಪೂರ್ಣ ನೆಲಸಮವಾಗಿದೆ. ರಸ್ತೆ ಪಕ್ಕ ನಿಂತಿದ್ದ ಎರಡು ಗ್ಯಾಸ್ ಟ್ಯಾಂಕರ್ ಗಳು ಎರಡು ಕಾರುಗಳು ಗಂಗಾವಳಿ ನದಿಗೆ ಬಿದ್ದಿದ್ದು, ನೀರಿನಲ್ಲಿ ಕೊಚ್ಚಿ ಹೋಗಿವೆ ಎಂದು ತಿಳಿದುಬಂದಿದೆ.