HomeKarnatakaದಾಖಲೆಯಿಲ್ಲದೆ ಗ್ರಾಮ ಲೆಕ್ಕಾಧಿಕಾರಿ ಸಾಗಿಸುತ್ತಿದ್ದ 1.10 ಕೋಟಿ ರೂ. ವಶಕ್ಕೆ

ದಾಖಲೆಯಿಲ್ಲದೆ ಗ್ರಾಮ ಲೆಕ್ಕಾಧಿಕಾರಿ ಸಾಗಿಸುತ್ತಿದ್ದ 1.10 ಕೋಟಿ ರೂ. ವಶಕ್ಕೆ

ಬೆಳಗಾವಿ: ರಾಮದುರ್ಗ ತಾಲೂಕಿನ ಹಲಗತ್ತಿ ಚೆಕ್ ಪೋಸ್ಟ್ ಬಳಿ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂಪಾಯಿಗೂ ಅಧಿಕ ಹಣವನ್ನು ರಾಮದುರ್ಗ ಠಾಣೆ ಪೋಲಿಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ನಿಪ್ಪಾಣಿಯ ಗ್ರಾಮ ಲೆಕ್ಕಾಧಿಕಾರಿ ರಾಮದುರ್ಗ ತಾಲೂಕಿನ ಹೊಸೂರು ಗ್ರಾಮದ ವಿಠಲ ಢವಳೇಶ್ವರ ಅವರು ತಮ್ಮ ಕಾರ್ ನಲ್ಲಿ ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದರು. ರಾಮದುರ್ಗ ಮಾರ್ಗವಾಗಿ ಬಾಗಲಕೋಟೆ ಕಡೆಗೆ ಅವರು ಹಣದೊಂದಿಗೆ ತೆರಳುತ್ತಿದ್ದ ಖಚಿತ ಮಾಹಿತಿ ಆಧರಿಸಿ ಕಾರ್ ಪರಿಶೀಲಿಸಿದಾಗ 1,10,62,900 ರೂಪಾಯಿ ನಗದು ದೊರೆತಿದೆ.

ಪೊಲೀಸರು ಹಣ ವಶಕ್ಕೆ ಪಡೆದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ಸಹಾಯಕ ನಿರ್ದೇಶಕ ಅಮಿತ್ ಶಿಂಧೆ ಪರಿಶೀಲನೆ ನಡೆಸಿದ್ದಾರೆ. ರಾಮದುರ್ಗ ಡಿವೈಎಸ್ಪಿ ಎಂ. ಪಾಂಡುರಂಗಯ್ಯ, ಸಿಪಿಐ ಈರಣ್ಣ ನೇತೃತ್ವದ ತಂಡ ದಾಳಿ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular