alex Certify ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆದೇಶ ವಾಪಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆದೇಶ ವಾಪಸ್

ಹಾಸನ: ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆದೇಶವನ್ನು ವಾಪಸ್ ಪಡೆಯಲಾಗಿದೆ. ವಾಹನ ಸಂಚಾರ ಬಂದ್ ಆದೇಶದಿಂದ ಸಮಸ್ಯೆಯಾಗಲಿರುವ ಹಿನ್ನಲೆಯಲ್ಲಿ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಸಕಲೇಶಪುರ ಉಪವಿಭಾಗಾಧಿಕಾರಿ ಶ್ರುತಿ ಆದೇಶ ಹೊರಡಿಸಿದ್ದಾರೆ. ಸಂಚಾರ ಸ್ಥಗಿತವಾದರೆ ಸಮಸ್ಯೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ನಿರ್ಬಂಧಿತ ನಿಯಮಗಳ ಅಡಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಸನ ಜಿಲ್ಲಾಡಳಿತ ವಾಹನ ಸಂಚಾರ ಬಂದ್ ಆದೇಶ ಹಿಂಪಡೆದುಕೊಂಡಿದೆ.

ಬೆಂಗಳೂರು -ಮಂಗಳೂರು ಹೆದ್ದಾರಿಯ ಹಾಸನದಿಂದ ಮಾರನಹಳ್ಳಿಯವರೆಗಿನ ರಸ್ತೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯುವ ಸಲುವಾಗಿ, ಸಾರ್ವಜನಿಕರ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜುಲೈ 18ರಿಂದ ದುರಸ್ತಿ ಕಾರ್ಯ ಪೂರ್ಣಗೊಳ್ಳುವವರೆಗೆ ಎಲ್ಲಾ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...