alex Certify ಅವಾಚ್ಯ ಪದಗಳಿಂದ ನಿಂದಿಸಿದ್ದಕ್ಕೆ ಕಾರ್ಮಿಕನ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅವಾಚ್ಯ ಪದಗಳಿಂದ ನಿಂದಿಸಿದ್ದಕ್ಕೆ ಕಾರ್ಮಿಕನ ಕೊಲೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಬಾಳಿಹಾಳ ಉಪ್ಪಾರಹಟ್ಟಿ ಗ್ರಾಮದಲ್ಲಿ ಕಾರ್ಮಿಕನನ್ನು ಹತ್ಯೆ ಮಾಡಲಾಗಿದೆ.

ರಾಜಸ್ಥಾನ ಮೂಲದ ಕಾರ್ಮಿಕ ಹುಕುಂ ಸಿಂಗ್(35) ಎಂಬುವನನ್ನು ಮತ್ತೊಬ್ಬ ಕಾರ್ಮಿಕ ಕೈಲಾಸರಾವ್ ಹತ್ಯೆ ಮಾಡಿದ ಆರೋಪ ಕೇಳಿ ಬಂದಿದೆ. ರಾಜಸ್ಥಾನದ ಹುಕುಂ ಸಿಂಗ್ ಮತ್ತು ಕೈಲಾಸ್ ಜೊತೆಗೆ ಕೆಲಸ ಮಾಡುತ್ತಿದ್ದರು. ಅವಾಚ್ಯ ಪದಗಳಿಂದ ನಿಂದಿಸಿದ್ದಕ್ಕೆ ಹುಕುಂಸಿಂಗ್ ನನ್ನು ಹತ್ಯೆ ಮಾಡಿದ ಆರೋಪ ಕೇಳಿ ಬಂದಿದೆ. ಸ್ಥಳಕ್ಕೆ ಡಿವೈಎಸ್ಪಿ ದಿನಕರ್, ಪಿಎಸ್ಐ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...