ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಿಂದ ಹಲವೆಡೆ ಗುಡ್ಡ ಕುಸಿದು ದುರಂತಗಳು ಸಂಭವಿಸಿದೆ. ನದಿ ಹಳ್ಳಗಳು ತುಂಬಿ ಹರಿಯುತ್ತಿದೆ. ಜಮೀನುಗಳು ಜಲಾವೃತವಾಗಿದೆ.
ರಾಜ್ಯದಲ್ಲಿ ಗಾಳಿ ಸಹಿತ ಇಂದು ಭಾರಿ ಮಳೆಯಾಗಲಿದ್ದು, ಮಲೆನಾಡು ಸೇರಿ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಲೆನಾಡು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಹಾಗೂ ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.