HomeKarnatakaಯುವತಿಗೆ ಡ್ರೈವಿಂಗ್ ಕಲಿಸುವಾಗ ಖಾಸಗಿ ಅಂಗ ಪ್ರದರ್ಶಿಸಿ ಕಿರುಕುಳ

ಯುವತಿಗೆ ಡ್ರೈವಿಂಗ್ ಕಲಿಸುವಾಗ ಖಾಸಗಿ ಅಂಗ ಪ್ರದರ್ಶಿಸಿ ಕಿರುಕುಳ

ಬೆಂಗಳೂರು: ಯುವತಿ ಜೊತೆ ಕಾರ್ ಡ್ರೈವಿಂಗ್ ಟ್ರೈನರ್ ಅಸಭ್ಯ ವರ್ತನೆ ತೋರಿದ ಆರೋಪ ಕೇಳಿಬಂದಿದೆ. ಆರೋಪಿ ಅಣ್ಣಪ್ಪನನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನ್ಯಾಷನಲ್ ಪಬ್ಲಿಕ್ ಸ್ಕೂಲ್ ಫ್ಲೈಓವರ್ ನಲ್ಲಿ ಯುವತಿಗೆ ಡ್ರೈವಿಂಗ್ ಕಲಿಸುವಾಗ ಆರೋಪಿ ಖಾಸಗಿ ಅಂಗ ಪ್ರದರ್ಶಿಸಿದ್ದಾನೆ. ಬಸವೇಶ್ವರನಗರದ ಮಾರುತಿ ಡ್ರೈವಿಂಗ್ ಸ್ಕೂಲ್ ಗೆ ಯುವತಿ ಚಾಲನಾ ತರಬೇತಿಗೆ ಸೇರಿದ್ದು, ಪರ್ಸನಲ್ ಟ್ರೈನರ್ ಆಗಿ ಡ್ರೈವಿಂಗ್ ಕಲಿಸಿಕೊಡಲು ಆರೋಪಿ ಮುಂದಾಗಿದ್ದ. ಕಾರ್ ನಲ್ಲಿ ಯುವತಿ ಜೊತೆಗೆ ಆರೋಪಿ ಅಣ್ಣಪ್ಪ ಅಸಭ್ಯವಾಗಿ ವರ್ತಿಸಿದ್ದ. ಯುವತಿಯ ದೂರು ಆಧರಿಸಿ ಬಸವೇಶ್ವರನಗರ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular