HomeEntertainmentBIG NEWS: ಸ್ಯಾಂಡಲ್ ವುಡ್ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ

BIG NEWS: ಸ್ಯಾಂಡಲ್ ವುಡ್ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ

ಬೆಂಗಳೂರು: ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗರಬಾವಿಯಲ್ಲಿ ನಡೆದಿದೆ.

ನಾಗರಬಾವಿಯ ತಮ್ಮ ನಿವಾಸದಲ್ಲಿ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಾಲದ ಸುಳಿಯಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ವಿನೋದ್ ದೊಂಡಾಲೆ ‘ಶಾಂತಂ ಪಾಪಂ’, ‘ಕರಿಮಣಿ’ ಸೇರಿದಂತೆ ಹಲವು ಧಾರಾವಾಹಿಗಳನ್ನು ನಿರ್ದೇಶಿಸಿದ್ದರು. ಪ್ರಸ್ತುತ ನೀನಾಸಂ ಸತೀಶ್ ಅಭಿನಯದ ‘ಅಶೋಕ ಬ್ಲೇಡ್’ ಚಿತ್ರ ನಿರ್ದೇಶನ ಮಾಡುತ್ತಿದ್ದರು. ಅಶೋಕ ಬ್ಲೇಡ್ ಸಿನಿಮಾದ ಕೊನೇ ಹಂತದ ಚಿತ್ರೀಕರಣ ಬಾಕಿ ಇತ್ತು. ಮುಂದಿನ ವಾರದಿಂದ ಚಿತ್ರೀಕರಣ ಮಾಡುವ ಸಿದ್ಧತೆ ನಡೆಸಲಾಗಿತ್ತು. ಅಲ್ಲದೇ ನಿನ್ನೆ ಕೂಡ ಚಿತ್ರ ತಂಡದವರ ಜೊತೆ ವಿನೋದ್ ಮಾತುಕತೆ ನಡೆಸಿದ್ದರು. ಆದರೆ ಈಗ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular