HomeKarnatakaBREAKING NEWS: ಮರಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್: ಚಾಲಕನ ಎರಡೂ ಕಾಲು ಕಟ್

BREAKING NEWS: ಮರಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್: ಚಾಲಕನ ಎರಡೂ ಕಾಲು ಕಟ್

ಧಾರವಾಡ: ಸರ್ಕಾರಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ಎರಡೂ ಕಾಲು ಕಟ್ ಆಗಿದ್ದು, ಅಪಘಾತದಲ್ಲಿ ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ ಘಟನೆ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ನಡೆದಿದೆ.

ಕಲಘಟಗಿಯ ರಾಮನಾಳ ಕ್ರಾಸ್ ಬಳಿ ಬಸ್ ಅಪಘಾತಕ್ಕೀಡಾಗಿದೆ. ದುರಂತದಲ್ಲಿ ಬಸ್ ಚಾಲಕನ ಎರಡೂ ಕಾಲುಗಳು ಕಟ್ ಆಗಿದ್ದು, ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿಯಿಂದ ಕುಮಟಾಗೆ ಹೋಗುತ್ತಿದ್ದ ಬಸ್ ನಲ್ಲಿ 30 ಪ್ರಯಾಣಿಕರು ಇದ್ದರು. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular