alex Certify ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ ಸಿದ್ಧರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ ಸಿದ್ಧರಾಮಯ್ಯ

ಚಿತ್ರದುರ್ಗ: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ. ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ವಿದ್ಯೆಯ ಅವಕಾಶ ಇಲ್ಲದವರು ಕುಲಕಸುಬನ್ನಷ್ಟೆ ಮಾಡಿಕೊಂಡು ಹಿಂದುಳಿದರು. ಶೋಷಿತ ಸಮುದಾಯಗಳ ವಿಮೋಚನೆಗೆ ಹೋರಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣದಿಂದಲೇ ಮೇಧಾವಿಯಾದರು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಸ್ವಾಭಿಮಾನ ಬೆಳೆಸಿಕೊಂಡು ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದರು.

ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಶಿಕ್ಷಣ ಪಡೆಯಲು ಸಾಧ್ಯವಾಗಿಲ್ಲ. ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು. ಎಸ್.ಸಿ./ ಎಸ್.ಟಿ. ಸಮುದಾಯಗಳ‌ ಜನಸಂಖ್ಯೆ ರಾಜ್ಯದಲ್ಲಿ 24% ಇದೆ. ಈ ಜನಸಂಖ್ಯೆಗೆ ಸಮವಾಗಿ ಅಭಿವೃದ್ಧಿ ಆಯವ್ಯಯದ ಶೇ. 24 ರಷ್ಟು ಹಣವನ್ನು ಈ ಸಮುದಾಯಗಳ ಏಳಿಗೆಗಾಗಿ ಮೀಸಲಿಟ್ಟಿದ್ದು, ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು, ಭೋವಿ ಸಮುದಾಯದ ಪ್ರತಿನಿಧಿಯನ್ನು ಕೆಪಿಎಸ್‌ಸಿ ಸದಸ್ಯರನ್ನಾಗಿ ಮಾಡಿದ್ದು ನಮ್ಮ ಸರ್ಕಾರ ಎಂದು ಹೇಳಿದ್ದಾರೆ.

ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಗಮವಾಗಿ ಮರುನಾಮಕರಣ ಮಾಡುಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನು ಈಡೇರಿಸಲಾಗುವುದು. ಸಿದ್ಧರಾಮೇಶ್ವರ ಅಧ್ಯಯನ‌ಪೀಠಕ್ಕಾಗಿ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...