alex Certify ಅಶ್ವಿನಿ ಪೊನ್ನಪ್ಪ, ರೋಹನ್ ಭೋಪಣ್ಣ ಸೇರಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ರಾಜ್ಯದ 9 ಮಂದಿಗೆ ತಲಾ 5 ಲಕ್ಷ ರೂ: ಸಿಎಂ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಶ್ವಿನಿ ಪೊನ್ನಪ್ಪ, ರೋಹನ್ ಭೋಪಣ್ಣ ಸೇರಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ರಾಜ್ಯದ 9 ಮಂದಿಗೆ ತಲಾ 5 ಲಕ್ಷ ರೂ: ಸಿಎಂ ಘೋಷಣೆ

ಬೆಂಗಳೂರು: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರದಿಂದ ನೀಡಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.

ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್ ನಲ್ಲಿ ಕುಮಾರಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್ ನಲ್ಲಿ ಕುಮಾರಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಕುಮಾರಿ ಧಿನಿಧಿ ದೇಸಿಂಗೂ, ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್ ನಲ್ಲಿ ಕುಮಾರಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್ ನಲ್ಲಿ ರೋಹನ್ ಭೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಅವರುಗಳು ಭಾರತವನ್ನು ಪ್ರತಿನಿಧಿಸುತ್ತಿದ್ದು, ಇದು ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ.

ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಅವರು ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನವಾಗಿ ತಲಾ 5 ಲಕ್ಷ ರೂಪಾಯಿ ಮಂಜೂರು ಮಾಡುವಂತೆ ಮನವಿ ಮಾಡಿದ್ದು, ಅವರ ಮನವಿಗೆ ಸ್ಪಂದಿಸಿ ಈ ಘೋಷಣೆ ಮಾಡಲಾಗಿದೆ.

ನಾಡಿನ ಕ್ರೀಡಾಪಟುಗಳು ಸೇರಿದಂತೆ ಭಾರತದ ಎಲ್ಲಾ ಕ್ರೀಡಾಳುಗಳು ಪ್ಯಾರಿಸ್ ಒಲಿಂಪಿಕ್‌ನಲ್ಲಿ ಅಮೋಘ ಸಾಧನೆಗೈದು ಭಾರತದ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಸಿಎಂ ಹಾರೈಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...