HomeKarnatakaಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಡೆಂಘೀ ಜ್ವರಕ್ಕೆ ಮತ್ತಿಬ್ಬರು ಬಾಲಕರು ಬಲಿ

ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಡೆಂಘೀ ಜ್ವರಕ್ಕೆ ಮತ್ತಿಬ್ಬರು ಬಾಲಕರು ಬಲಿ

ಬೆಂಗಳೂರು: ರಾಜ್ಯದಲ್ಲಿ ಶಂಕಿತ ಡೆಂಘೀ ಜ್ವರದಿಂದ ಶನಿವಾರ ಮತ್ತಿಬ್ಬರು ಬಾಲಕರು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜನ್ನತ್ ನಗರದ ನಿವಾಸಿ ಮೊಹಮ್ಮದ್ ನಯಾನ್(6)ರು ಮತ್ತು ಹೊಳೆನರಸೀಪುರ ತಾಲೂಕಿನ ದೊಡ್ಡಹಳ್ಳಿಯ ಚಿರಂತ್ ಗೌಡ(6) ಮೃತಪಟ್ಟ ಬಾಲಕರು.

ಕಳೆದ ಐದು ದಿನದಿಂದ ಜ್ವರದಿಂದ ಬಳಲುತ್ತಿದ್ದ ನಯಾನ್ ನನ್ನು ಪೋಷಕರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾನೆ.

ಒಂದು ವಾರದಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದ ಚಿರಂತ್ ನನ್ನು ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular