ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ಗಾಗಿ ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್(IOA)ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) 8.5 ಕೋಟಿ ರೂಪಾಯಿಗಳನ್ನು ನೀಡಲಿದೆ.
BCCI ಪ್ರಮುಖರಾದ ಜಯ್ ಶಾ ಅವರು ಪ್ಯಾರಿಸ್ ಗೆ ತೆರಳಲಿರುವ ಭಾರತೀಯ ತಂಡಕ್ಕೆ ಹಣಕಾಸಿನ ನೆರವು ಘೋಷಿಸಿದ್ದಾರೆ.
2024 ರ ಒಲಿಂಪಿಕ್ಸ್ನಲ್ಲಿ ಭಾಗವಹಿಸಲು 117 ಸದಸ್ಯರ ಭಾರತೀಯ ಪಡೆ ಪ್ಯಾರಿಸ್ಗೆ ತೆರಳಲಿದೆ.
2024 ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುವ ನಮ್ಮ ಕ್ರೀಡಾಪಟುಗಳನ್ನು ಬಿಸಿಸಿಐ ಬೆಂಬಲಿಸುತ್ತದೆ ಎಂದು ಘೋಷಿಸಲು ನಾನು ಹೆಮ್ಮೆಪಡುತ್ತೇನೆ. ನಾವು ಅಭಿಯಾನಕ್ಕಾಗಿ IOA ಗೆ 8.5 ಕೋಟಿ ರೂ.ಗಳನ್ನು ನೀಡುತ್ತಿದ್ದೇವೆ. ಇಡೀ ತಂಡಕ್ಕೆ ಶುಭ ಹಾರೈಸುತ್ತೇವೆ ಎಂದು ಜಯ್ ಶಾ ತಿಳಿಸಿದ್ದಾರೆ.