HomeKarnatakaವಾಲ್ಮೀಕಿ ನಿಗಮ ಹಗರಣ: ಕಾಂಗ್ರೆಸ್ ಶಾಸಕ ನಾಗೇಂದ್ರ ಕಸ್ಟಡಿ ಇಂದಿಗೆ ಅಂತ್ಯ

ವಾಲ್ಮೀಕಿ ನಿಗಮ ಹಗರಣ: ಕಾಂಗ್ರೆಸ್ ಶಾಸಕ ನಾಗೇಂದ್ರ ಕಸ್ಟಡಿ ಇಂದಿಗೆ ಅಂತ್ಯ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇ.ಡಿ.) ಶಾಸಕ ಬಿ. ನಾಗೇಂದ್ರ ಅವರ ಕಸ್ಟಡಿಯನ್ನು ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡುವ ಸಾಧ್ಯತೆ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 12ರಂದು ನಾಗೇಂದ್ರ ಅವರನ್ನು ಇಡಿ ಬಂಧಿಸಿತ್ತು. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಾಗೇಂದ್ರ ಅವರನ್ನು ಜುಲೈ 18ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಬೇಕು ಎಂದು ಇಡಿ ಮನವಿ ಮಾಡಿದ್ದ ಕಾರಣ ನ್ಯಾಯಾಲಯ ಜುಲೈ 22 ರವರೆಗೆ ಕಸ್ಟಡಿ ಅವಧಿ ವಿಸ್ತರಿಸಿತು. ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮತ್ತಷ್ಟು ದಿನ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular