alex Certify ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ವಿದೇಶಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ವಿದೇಶಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಪ್ರಸಕ್ತ(2024-25) ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪೋಷಕರ ವಾರ್ಷಿಕ ಆದಾರ ರೂ.6 ಲಕ್ಷಗಳ ಒಳಗಿದ್ದಲ್ಲಿ 2 ವರ್ಷಗಳ ಕೋರ್ಸ್ಗೆ ಗರಿಷ್ಟ ರೂ.20 ಲಕ್ಷ ಹಾಗೂ ರೂ.6 ಲಕ್ಷದಿಂದ ರೂ. 15 ಲಕ್ಷಗಳ ಒಳಗಿದ್ದಲ್ಲಿ 2 ವರ್ಷಗಳ ಕೋರ್ಸ್ಗೆ ರೂ.10 ಲಕ್ಷಗಳ ಗರಿಷ್ಟ ಮಿತಿಯಲ್ಲಿ ವಿದ್ಯಾರ್ಥಿ ವೇತನ ಪಾವತಿಸಲಾಗುವುದು. https://sevasindhu.karnataka.in/sevasindhu/Department services ಈ ಆನ್ಲೈನ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 30 ಕೊನೆಯ ದಿನವಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ.

ಇಲಾಖಾ ವೆಬ್ಸೈಟ್ https://dom.karnataka.gov.in ಹಾಗೂ ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಇವರನ್ನುಹಾಗೂ ಕಚೇರಿ ದೂ.ಸಂ.08272-225528 ಮತ್ತು ಮಾಹಿತಿ ಕೇಂದ್ರ, ಮಡಿಕೇರಿ 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...