SHOCKING : ರಾಜ್ಯದಲ್ಲಿ ಘೋರ ಘಟನೆ ; ಮತ್ತೋರ್ವ ‘SSLC’ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ..!

ಚಿತ್ರದುರ್ಗ : ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾದ ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿ ಪ್ರಜ್ವಲ್ (16) ಎಂಬ ವಿದ್ಯಾರ್ಥಿ ಮಫ್ಲರ್ ನಿಂದ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಳಲ್ಕೆರೆಯ ಖಾಸಗಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ ಪ್ರಜ್ವಲ್ ಪರೀಕ್ಷೆಗೆ ಹಾಜರಾಗದ ಹಿನ್ನಲೆ ಶಿಕ್ಷಕರು ಪೋಷಕರನ್ನು ಕರೆದುಕೊಂಡು ಬಾ ಎಂದಿದ್ದಾರೆ. ಅಷ್ಟಕ್ಕೇ ವಿದ್ಯಾರ್ಥಿ ಸೂಸೈಡ್ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read