alex Certify ಪ್ರಸಕ್ತ ಅಧಿವೇಶನದಲ್ಲೇ ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಮೀಸಲಾತಿ ಮಸೂದೆ ಮಂಡಿಸದಿದ್ದರೆ ‘ಕರ್ನಾಟಕ ಬಂದ್’ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಸಕ್ತ ಅಧಿವೇಶನದಲ್ಲೇ ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಮೀಸಲಾತಿ ಮಸೂದೆ ಮಂಡಿಸದಿದ್ದರೆ ‘ಕರ್ನಾಟಕ ಬಂದ್’ ಎಚ್ಚರಿಕೆ

ಬೆಂಗಳೂರು: ಪ್ರಸಕ್ತ ಮುಂಗಾರು ಅಧಿವೇಶನದಲ್ಲಿ ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲಾತಿ ಕುರಿತ ಮಸೂದೆ ಮಂಡಿಸಬೇಕು ಎಂದು ಕನ್ನಡ ಒಕ್ಕೂಟ ಚಳವಳಿಯ ಪ್ರಮುಖ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.

ಕನ್ನಡಿಗರಿಗೆ ಮೀಸಲಾತಿ ಮಸೂದೆ ಮಂಡನೆ ಮಾಡಬೇಕೆಂದು ಒತ್ತಾಯಿಸಿ ಸೋಮವಾರ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕನ್ನಡ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಪ್ರಸಕ್ತ ಅಧಿವೇಶನದಲ್ಲಿ ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮೀಸಲಾತಿ ಕುರಿತ ಮಸೂದೆ ಮಂಡಿಸದಿದ್ದರೆ ನಿರಂತರ ಹೋರಾಟ ನಡೆಸಲಾಗುವುದು. ಅಖಂಡ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...