ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ 7ನೇ ಬಜೆಟ್ ಹಾಗೂ ದಾಖಲೆಯ ಬಜೆಟ್ ಆಗಿದೆ.
ಸಂಸತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆ ಸಿಕ್ಕಿದ್ದು, ಕೆಲವೇ ಹೊತ್ತಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಸಕ್ತ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ.