alex Certify BREAKING NEWS: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ವಿತ್ತ ಸಚಿವೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ವಿತ್ತ ಸಚಿವೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಮೊದಲ ಬಾರಿ ಉದ್ಯೋಗ ಹುಡುಕುವವರಿಗೆ ದೊಡ್ಡ ಸಹಾಯ ಸಿಗಲಿದೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದರ ಗರಿಷ್ಠ ಮೊತ್ತ 15,000 ರೂ. ಇಪಿಎಫ್ ಒ ನಲ್ಲಿ ನೊಂದಾಯಿಸಲ್ಪಟ್ಟವರು ಈ ಭತ್ಯೆ ಪಡೆಯಲಿದ್ದಾರೆ. ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...