ಭಾರತ ತಂಡದ ಸ್ಪಿನ್ ಮಾಂತ್ರಿಕ ಯುಜುವೇಂದ್ರ ಚಾಹಲ್ ಇಂದು ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
2004 ರ ಸಮಯದಲ್ಲಿ ಡೊಮೆಸ್ಟಿಕ್ ಕ್ರಿಕೆಟ್ ನಲ್ಲಿ ಹರಿಯಾಣ ತಂಡದಲ್ಲಿದ್ದ ಇವರಿಗೆ 2011ರಂದು ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಅವಕಾಶ ಸಿಕ್ಕಿತು. ಬಳಿಕ 2014ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇವರನ್ನು ಖರೀದಿಸಿತು. ತಮ್ಮ ವಿಭಿನ್ನ ಸ್ಪಿನ್ ಮೂಲಕವೇ ಬ್ಯಾಟ್ಸ್ ಮ್ಯಾನ್ ಗಳ ವಿಕೆಟ್ ಕಬಳಿಸುತ್ತಿದ್ದ ಇವರು 2016 ಜೂನ್ 11ರಂದು ನಡೆದ ಭಾರತ ಹಾಗೂ ಜಿಂಬಾಬ್ವೆ ನಡುವಣ ಏಕದಿನ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಏಕದಿನ ಕ್ರಿಕೆಟ್ ನಲ್ಲಿ 72 ಪಂದ್ಯಗಳನ್ನಾಡಿರುವ ಇವರು 121 ವಿಕೆಟ್ ಕಬಳಿಸಿದರೆ ಟಿ ಟ್ವೆಂಟಿ ಕ್ರಿಕೆಟ್ನಲ್ಲಿ 86 ಪಂದ್ಯಗಳಲ್ಲಿ 96 ವಿಕೆಟ್ ಪಡೆದುಕೊಂಡಿದ್ದಾರೆ.
ಸುಮಾರು 7-8 ವರ್ಷಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಪ್ರತಿನಿಧಿಸಿರುವ ಇವರು ವಿರಾಟ್ ಕೊಹ್ಲಿ ಸೇರಿದಂತೆ ಹಲವಾರು ಆಟಗಾರರೊಂದಿಗೆ ಸಾಕಷ್ಟು ನಂಟು ಹೊಂದಿದ್ದಾರೆ. ಇತ್ತೀಚಿಗೆ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದರೂ ಆರ್ಸಿಬಿ ತಂಡದ ಮೇಲೆ ಸಾಕಷ್ಟು ಅಭಿಮಾನ ಹೊಂದಿದ್ದಾರೆ.
ಇಂದು ಸೋಶಿಯಲ್ ಮೀಡಿಯಾದಲ್ಲಿ ಹಲವಾರು ಕ್ರಿಕೆಟಿಗರು ಯುಜುವೇಂದ್ರ ಚಾಹಲ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ