alex Certify ರಾಜ್ಯಕ್ಕೆ ಗುಡ್ ನ್ಯೂಸ್: ಹೊಸ ಆದೇಶ ನೀಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿರಾಕರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಗುಡ್ ನ್ಯೂಸ್: ಹೊಸ ಆದೇಶ ನೀಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿರಾಕರಣೆ

ನವದೆಹಲಿ: ಕರ್ನಾಟಕದಿಂದ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರಿನ ಪ್ರಮಾಣ ತೃಪ್ತಿಕರವಾಗಿದೆ ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಭಿಪ್ರಾಯಪಟ್ಟಿದ್ದು, ಹೊಸ ಆದೇಶ ನೀಡಲು ನಿರಾಕರಿಸಿದೆ.

ಬುಧವಾರ ನಡೆದ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕದ ಪ್ರತಿನಿಧಿಗಳು ಜೂನ್ ನಿಂದ ಜುಲೈ 22 ರವರೆಗೆ ರಾಜ್ಯದ ನಾಲ್ಕು ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಮಾಹಿತಿ ಮತ್ತು ಇದೇ ಅವಧಿಯಲ್ಲಿ 30 ವರ್ಷಗಳ ಸರಾಸರಿಯ ಒಳಹರಿವು ಕುರಿತಾಗಿ ವಿವರ ನೀಡಿದ್ದಾರೆ. ತಮಿಳುನಾಡಿಗೆ ಪ್ರತಿದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಶಿಫಾರಸು ಮಾಡಿತ್ತು.

ನಂತರದಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ತಮಿಳುನಾಡಿನ ನದಿ ಮುಖಜ ಭೂಮಿಯಲ್ಲೂ ಉತ್ತಮ ಮಳೆಯಾಗಿದೆ. ತಮಿಳುನಾಡಿನ ಮೂರು ಜಲಾಶಯಗಳಲ್ಲಿಯೂ ಸಂಗ್ರಹವಾದ ನೀರಿನ ಪ್ರಮಾಣದ ಬಗ್ಗೆ ಮಾಹಿತಿ ಪಡೆದ ಪ್ರಾಧಿಕಾರ ಕರ್ನಾಟಕವು ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರಿನ ಪ್ರಮಾಣ ತೃಪ್ತಿಕರ ಎಂದು ಅಭಿಪ್ರಾಯಪಟ್ಟಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...