ಬೆಂಗಳೂರು: ಮುಡಾ ನಿವೇಶನ ಅಕ್ರಮ ಹಂಚಿಕೆ ಆರೋಪ ಪ್ರಕರಣ ಸಂಬಂಧ ಚರ್ಚೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ವಿಪಕ್ಷ ಸದಸ್ಯರು ಒತ್ತಾಯಿಸಿ ಸದನದಲ್ಲಿ ರಾತ್ರಿಯಿಡಿ ಹೋರಾಟ ನಡೆಸಿದ್ದಾರೆ.
ಹಗರಣಗಳ ಚರ್ಚೆಗೆ ಅವಕಾಶ ನೀಡಲು ಸ್ಪೀಕರ್ ಮತ್ತು ಸಭಾಪತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಸದನದಲ್ಲಿಯೇ ಅಹೋರಾತ್ರಿ ಹೋರಾಟ ನಡೆಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದಲ್ಲಿ ತಾಳ, ತಮಟೆ ಹಿಡಿದು ಭಜನೆ ಮಾಡಿ ಧರಣಿ ನಡೆಸಿದ್ದಾರೆ.
ವಿಪಕ್ಷ ನಾಯಕರಾದ ಆರ್. ಅಶೋಕ, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಸ್.ಎಲ್. ಭೋಜೇಗೌಡ ಸೇರಿದಂತೆ ಬಿಜೆಪಿ, ಜೆಡಿಎಸ್ ಶಾಸಕರು ಧರಣಿ ನಡೆಸಿದ್ದು, ಸದನದಲ್ಲಿಯೇ ರಾತ್ರಿ ಕಳೆದಿದ್ದಾರೆ. ವಿಧಾನಸಭೆಯಲ್ಲಿ ಮಲಗಿದ್ದ ಶಾಸಕರು ಬೆಳಿಗ್ಗೆ ಎದ್ದು ವಾಕಿಂಗ್ ಮಾಡಿದ್ದಾರೆ. ಪ್ರಭು ಚೌಹಾಣ್, ಭರತ್ ಶೆಟ್ಟಿ, ಶ್ರೀಶೈಲ ಸದನದ ಪಡಸಾಲೆಯಲ್ಲಿ ವ್ಯಾಯಾಮ, ವಾಕಿಂಗ್ ಮಾಡಿದ್ದಾರೆ.