
ಬೆಂಗಳೂರು: ವಿದೇಶದಿಂದ ಕಳ್ಳ ಮಾರ್ಗದಲ್ಲಿ ಸಾಗಿಸುತ್ತಿದ್ದ 1.68 ಕೋಟಿ ರೂಪಾಯಿ ಮೌಲ್ಯದ 2.5 ಕೆಜಿ ಚಿನ್ನವನ್ನು ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ದುಬೈನಿಂದ ಮಂಗಳವಾರ ದುಬೈನಿಂದ ಆಗಮಿಸಿದ್ದ ಇಬ್ಬರು ಪ್ರಯಾಣಿಕರು ಕಸ್ಟಮ್ಸ್ ಬಲೆಗೆ ಬಿದ್ದಿದ್ದಾರೆ. ಅಕ್ರಮ ಚಿನ್ನ ಸಾಗಾಣಿಕೆ ಬಗ್ಗೆ ಖಚಿತ ಮಾಹಿತಿ ಪಡೆದ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಟ್ಟೆಯೊಳಗೆ ಚಿನ್ನದ ಗಟ್ಟಿಗಳನ್ನು ಅಡಗಿಸಿಟ್ಟುಕೊಂಡು ಆರೋಪಿಗಳು ಸಾಗಿಸುತ್ತಿದ್ದರು.
ದುಬೈನಿಂದ ಆಗಮಿಸುವ ವಿಮಾನದಲ್ಲಿ ಚಿನ್ನದ ಸಾಗಾಣಿಕೆ ನಡೆದಿದೆ ಎಂದು ಗುಪ್ತಚರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ. ದುಬೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರನ್ನು ಕೂಲಂಕಷವಾಗಿ ತಪಾಸಣೆ ನಡೆಸಿದಾಗ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.