HomeLive Newsಮಹಿಳಾ ಟಿ ಟ್ವೆಂಟಿ ಏಷ್ಯಾ ಕಪ್; ನಾಳೆ ಮೊದಲ ಸೆಮಿ ಫೈನಲ್ ನಲ್ಲಿ ಸೆಣಸಾಡಲಿವೆ ಭಾರತ...

ಮಹಿಳಾ ಟಿ ಟ್ವೆಂಟಿ ಏಷ್ಯಾ ಕಪ್; ನಾಳೆ ಮೊದಲ ಸೆಮಿ ಫೈನಲ್ ನಲ್ಲಿ ಸೆಣಸಾಡಲಿವೆ ಭಾರತ ಹಾಗೂ ಬಾಂಗ್ಲಾದೇಶ

ಮಹಿಳಾ ಭಾರತ ತಂಡ ಲೀಗ್ ಹಂತದಲ್ಲಿ ಒಂದು ಪಂದ್ಯವನ್ನು ಸೋಲದೆ ಸೆಮಿ ಫೈನಲ್ ಗೆ ಪ್ರವೇಶಿಸಿದ್ದು, ನಾಳೆ ಬಾಂಗ್ಲಾದೇಶದೊಂದಿಗೆ ಹೋರಾಡಲು ಸಜ್ಜಾಗಿದೆ. ಮತ್ತೊಂದೆಡೆ  ನಿನ್ನೆಯ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ದುಸ್ಥಿತಿಯಲ್ಲಿದ್ದ ಬಾಂಗ್ಲಾದೇಶ ತಂಡ ಮಲೇಶಿಯಾ ಎದುರು 114 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಸೆಮಿ ಫೈನಲ್ ಗೆ ಎಂಟ್ರಿ ಕೊಟ್ಟಿದೆ.

ನಾಳೆ ಮೊದಲ ಸೆಮಿ ಫೈನಲ್ ನಲ್ಲಿ ಭಾರತ ಹಾಗೂ ಬಾಂಗ್ಲಾದೇಶ ಮುಖಾಮುಖಿಯಾಗಲಿದ್ದು, ಗೆದ್ದ ತಂಡ ಟಿ ಟ್ವೆಂಟಿ ಏಷ್ಯಾ ಕಪ್‌ನ ಫೈನಲ್ ಗೆ ಪ್ರವೇಶ ಪಡೆಯಬಹುದಾಗಿದೆ. ಮಹಿಳಾ ಭಾರತ ತಂಡ ಏಷ್ಯಾ ಕಪ್ ಟ್ರೋಫಿ ಎತ್ತಿ ಹಿಡಿಯುವ ಉತ್ಸಾಹದಲ್ಲಿದ್ದು, ಇದಾದ ಬಳಿಕ ಮತ್ತೊಂದು ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಬಲಿಷ್ಠ ಶ್ರೀಲಂಕಾ ತಂಡ ಕಾದಾಡಲಿವೆ. ಒಟ್ಟಾರೆ ಜುಲೈ 28 ರಂದು ನಡೆಯಲಿರುವ ಫೈನಲ್ ಪಂದ್ಯಕ್ಕೆ ಯಾವ ತಂಡ ಸ್ಥಾನ  ಪಡೆಯಲಿದೆ ಎಂದು ಕ್ರಿಕೆಟ್ ಪ್ರೇಮಿಗಳಲ್ಲಿ ಕುತೂಹಲ ಮೂಡಿದೆ.

For Latest News Updates, Join Our Whatsapp Community🚩
RELATED ARTICLES

Most Popular