HomeKarnatakaಭಾರಿ ಮಳೆಗೆ ಮನೆಗೆ ನುಗ್ಗಿದ ನೀರು; ಕಾಲು ಜಾರಿ ಬಿದ್ದು ಮಹಿಳೆ ಸಾವು

ಭಾರಿ ಮಳೆಗೆ ಮನೆಗೆ ನುಗ್ಗಿದ ನೀರು; ಕಾಲು ಜಾರಿ ಬಿದ್ದು ಮಹಿಳೆ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ನೀರು ಮನೆಗೆ ನುಗ್ಗಿದ ಪರಿಣಾಮ ಅನಾಹುತವೊಂದು ಸಂಭವಿಸಿದೆ. ಕಾಲು ಜಾರಿ ಬಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಳಗಾವಿಯ ಅಮನ್ ನಗರದಲ್ಲಿ ಈ ದುರಂತ ಸಂಭವಿಸಿದೆ. ಭಾರಿ ಮಳೆಯಿಂದಾಗಿ ಕಾಲೋನಿಯ ಡ್ರೈನೇಜ್ ನೀರು ಮನೆಗಳಿಗೆ ನುಗ್ಗಿದೆ. ಅಮನ್ ನಗರದಲ್ಲಿ ಅವಾಂತರವೇ ಸೃಷ್ಟಿಯಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ನಡುವೆ ಡ್ರೈನೇಜ್ ವಾಟರ್ ಮನೆಗೆ ನುಗ್ಗಿ, ಮನೆಯಲ್ಲಿದ್ದ ಮಹಿಳೆ ಕಾಲು ಜಾರಿ ಬಿದ್ದು, ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಮೆಹಬೂಬಿ ಅದಂಸಾಹೇಬ್ ಮಕಂದಾರ್ ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆಯ ಶವವನ್ನು ಸಾಗಿಸಲು ಕುಟುಂಬದವರು ಪರದಾಡಿದ್ದಾರೆ. ಕಾಲೋನಿ ತುಂಬೆಲ್ಲ ಮೊಳಕಾಲಿನವರೆಗೆ ನೀರು ನಿಂತಿದ್ದು, ತುಂಬಿ ಹರಿಯುತ್ತಿದ್ದ ನೀರಿನಲ್ಲಿಯೇ ಸಾಗಿ ಶವ ಸಂಸ್ಕಾರ ನೆರವೇರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular