ಬೆಂಗಳೂರು: ಅನುಸೂಚಿತ ಬುಡಕಟ್ಟು ಸಮುದಾಯಗಳಿಗೆ ಸಿಗುವ ಸೌಲಭ್ಯಗಳನ್ನು ಇತರೆ ಅರಣ್ಯ ವಾಸಿಗಳಿಗೂ ಕಲ್ಪಿಸುವ ಉದ್ದೇಶದಿಂದ ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ತರಬೇಕೆಂದು ಕೇಂದ್ರ ಸರ್ಕಾರಕ್ಕೆ ಕೋರುವ ನಿರ್ಣಯವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.
ವಿಧಾನ ಮಂಡಲದ ಉಭಯ ಸದನಗಳಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಮಂಡಿಸಿದ ನಿರ್ಣಯ ಅಂಗೀಕಾರ ಪಡೆದುಕೊಂಡಿದೆ.
ಅನುಸೂಚಿತ ಬುಡಕಟ್ಟು ಹೊರತಾದ ಸಮುದಾಯದ ಜನರಿಗೆ ಅರಣ್ಯ ಹಕ್ಕು ಕಾಯ್ದೆಯ ಬಲ ದೊರೆತಿಲ್ಲ. ಹೀಗಾಗಿ ಕಾಯ್ದೆಯಲ್ಲಿನ ಕೆಲ ನಿಯಮಗಳು ಅಡ್ಡಿಯಾಗಿದ್ದು, ಕಾರ್ಯಸಾಧುವಲ್ಲದ ನಿಯಮಗಳನ್ನು ಬದಲಿಸುವಂತೆ ಹೇಳಲಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದ ಅರಣ್ಯ ಹಕ್ಕು ಕಾಯ್ದೆಯಿಂದ ಕೆಲವು ಪ್ರಕರಣಗಳು ಅನೇಕ ದಶಕಗಳಿಂದ ಇತ್ಯರ್ಥವಾಗಿಲ್ಲ. ಹೀಗಾಗಿ ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ತರಬೇಕೆಂದು ಸರ್ಕಾರ ನಿರ್ಣಯ ಕೈಗೊಂಡಿದೆ.