HomeKarnatakaBREAKING NEWS: ಭಾರಿ ಮಳೆ: ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

BREAKING NEWS: ಭಾರಿ ಮಳೆ: ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಮೂರು ತಾಲೂಕುಗಳಲ್ಲಿ ಆಯಾತಾಲೂಕು ತಹಶೀಲ್ದಾರ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಸಂಗನವಾಡಿ ಕೇಂದ್ರಗಳು, ಶಾಲೆ, ಕಾಲೇಜು, ಡಿಪ್ಲೋಮಾ, ಪಿಯು ಕಾಲೇಜು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular