ರಾಜ್ಯ ಸರ್ಕಾರಿ ನೌಕರರಿಗೆ ‌ʼಗುಡ್‌ ನ್ಯೂಸ್ʼ ; ಇಲ್ಲಿದೆ ಡೀಟೆಲ್ಸ್

ರಾಜ್ಯ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಸುಮಾರು ಎರಡು ವಾರಗಳ ಹಿಂದೆ ಸಚಿವ ಸಂಪುಟದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಅನುಮೋದನೆ ನೀಡಲಾಗಿದೆ. ಇದು ಆಗಸ್ಟ್ 1 ರಿಂದ ಜಾರಿಗೆ ಬರಲಿದೆ. ಇದರಿಂದ ರಾಜ್ಯ ಸರ್ಕಾರದ ಲಕ್ಷಾಂತರ ಉದ್ಯೋಗಿಗಳ ವೇತನ ಹೆಚ್ಚಾಗಲಿದೆ.

ರಾಜ್ಯ ಸರ್ಕಾರವು ಆಗಸ್ಟ್ 1 ರಿಂದ 7 ನೇ ವೇತನ ಆಯೋಗವನ್ನು ಜಾರಿಗೆ ತರುವುದಾಗಿ ಘೋಷಿಸಿದೆ. ಈ ಬಗ್ಗೆ ಮಾತನಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ, ಇದು ಜನರ ಬೇಡಿಕೆಗಳಲ್ಲಿ ಒಂದಾಗಿದೆ. ಇದರಿಂದ ಸುಮಾರು 14 ರಿಂದ 15 ಲಕ್ಷ ರಾಜ್ಯ ನೌಕರರಿಗೆ ಪ್ರಯೋಜನವಾಗಲಿದೆ ಎಂದಿದ್ದರು.

ಮಾಜಿ ಮುಖ್ಯ ಕಾರ್ಯದರ್ಶಿ ಕೆ ಸುಧಾಕರ್ ರಾವ್ ನೇತೃತ್ವದ 7 ನೇ ವೇತನ ಆಯೋಗವು ಕರ್ನಾಟಕ ಸರ್ಕಾರಿ ನೌಕರರ ಮೂಲ ವೇತನದಲ್ಲಿ ಶೇಕಡಾ 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ವೇತನ ಹೆಚ್ಚಳದಿಂದ ಸರಕಾರದ ಬೊಕ್ಕಸಕ್ಕೆ ವಾರ್ಷಿಕ 17,440.15 ಕೋಟಿ ಹೆಚ್ಚುವರಿ ಹೊರೆ ಬೀಳಲಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಆಗಸ್ಟ್‌ನಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಘೋಷಿಸಿದ ಬೆನ್ನಲ್ಲೇ, ಸಿದ್ದರಾಮಯ್ಯ ಸರ್ಕಾರವು ವೇತನ ಹೆಚ್ಚಳದ ಕುರಿತು ನಿರ್ಧಾರ ಕೈಗೊಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read