alex Certify ಬಿಜೆಪಿ ಪಾದಯಾತ್ರೆಯ ಒಂದೊಂದು ದಿನವೂ ಅವರ ಒಂದೊಂದು ಹಗರಣ ಬಯಲು: ವಿಪಕ್ಷದವರು ತಾವೇ ತೋಡಿಕೊಂಡ ಬಾವಿಗೆ ತಾವೇ ಬೀಳುತ್ತಿದ್ದಾರೆ: ಡಿಸಿಎಂ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಪಾದಯಾತ್ರೆಯ ಒಂದೊಂದು ದಿನವೂ ಅವರ ಒಂದೊಂದು ಹಗರಣ ಬಯಲು: ವಿಪಕ್ಷದವರು ತಾವೇ ತೋಡಿಕೊಂಡ ಬಾವಿಗೆ ತಾವೇ ಬೀಳುತ್ತಿದ್ದಾರೆ: ಡಿಸಿಎಂ ವಾಗ್ದಾಳಿ

ಬೆಂಗಳೂರು: ಬಿಜೆಪಿ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ದೇಶದಲ್ಲಿ ಪಾದಯಾತ್ರೆ ಹೋರಾಟ ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಈಗ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು ಪ್ರಚಾರ ಪಡೆಯಲು ಬಿಜೆಪಿಯವರು ಷಡ್ಯಂತ್ರ ರೂಪಿಸಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ, ಮೂಡಾ ಅಕ್ರಮ ವಿಚಾರವಾಗಿ ಬಿಜೆಪಿಯವರು ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿಯವರು ಹಗರಣಗಳ ಸರದಾರರು. ತಾವೇ ತೋಡಿಕೊಂಡಿರುವ ಬಾವಿಗೆ ಬೀಳಲು ಹೋಗುತ್ತಿದ್ದಾರೆ. ದೇಶದಲ್ಲೇ ಕಾಂಗ್ರೆಸ್ ಆಡಳಿತದಲ್ಲಿರುವ ಅತಿ ದೊಡ್ಡ ರಾಜ್ಯ ಕರ್ನಾಟಕ. ಹೀಗಾಗಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ ಎಣ್ದರು.

ಈಗಾಗಲೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿಗಳು ಅಕ್ರಮ ಎಸಗಿದ್ದಾರೆ ಎಂಬುದು ಗೊತ್ತಾಗುತ್ತಿದ್ದಂತೆ ನಮ್ಮ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುತ್ತಿದೆ. ಹಲವರನ್ನು ಬಂಧಿಸಿ, ಅಕ್ರಮವಾಗಿ ಸಾಗಾಟ ಮಾಡಿದ್ದ ಹಣವನ್ನು ವಾಪಸ್ ಪಡೆದಿದ್ದಾರೆ. ವಿಪಕ್ಷಗಳು ಪ್ರಚಾರ ಪಡೆಯಲು ಬೇರೆ ತನಿಖಾ ಸಂಸ್ಥೆಗಳನ್ನು ಕರೆತಂದು ನಮ್ಮವರಿಗೆ ಕಿರುಕುಳ ನೀಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಕಾನೂನು ಪ್ರಕಾರ ಅವರ ಪ್ರಯತ್ನ ಅವರು ಮಾಡಲಿ ಎಂದು ಹೇಳಿದರು.
ಬಿಜೆಪಿ ಪಾದಯಾತ್ರೆಯ ಒಂದೊಂದು ದಿನವೂ ಅವರ ಒಂದೊಂದು ಹಗರಣ ಬಯಲು ಮಾಡುತ್ತೇವೆ:

ಇನ್ನು ಬಿಜೆಪಿಯವರು ಪಾದಯಾತ್ರೆ ಮಾಡುವ ಮೂಲಕ ಅವರ ಅಕ್ರಮಗಳನ್ನು ಬಯಲು ಮಾಡಲು ನಮಗೆ ಸದಾವಕಾಶವನ್ನು ಒದಗಿಸಿಕೊಟ್ಟಿದ್ದಾರೆ. ಅವರು ಪಾದಯಾತ್ರೆ ಮಾಡುವಾಗ ಒಂದೊಂದು ದಿನವೂ ಅವರ ಒಂದೊಂದು ಅಕ್ರಮಗಳನ್ನು ನಾವು ಬಯಲು ಮಾಡುತ್ತೇವೆ. ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಪ್ರಸ್ತಾಪಿಸಿರುವ ಹಗರಣಗಳನ್ನು ನಿತ್ಯ ಒಂದರಂತೆ ಬಯಲು ಮಾಡುತ್ತೇವೆ ಎಂದು ತಿಳಿಸಿದರು.

ಬಿಜೆಪಿಯವರು ಪಾದಯಾತ್ರೆ ಹೋರಾಟ ಮಾಡುವ ಮುನ್ನ, ಅವರ ಕಾಲದಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಮೊದಲು ಉತ್ತರ ನೀಡಲಿ ಎಂದು ಆಗ್ರಹಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...