HomeKarnatakaBIG NEWS: ಪೋಕ್ಸೋ ಕೇಸ್: ಮಾಜಿ ಸಿಎಂ ಯಡಿಯೂರಪ್ಪ ಬಂಧಿಸದಂತೆ ನೀಡಿದ್ದ ಆದೇಶ ವಿಸ್ತರಣೆ

BIG NEWS: ಪೋಕ್ಸೋ ಕೇಸ್: ಮಾಜಿ ಸಿಎಂ ಯಡಿಯೂರಪ್ಪ ಬಂಧಿಸದಂತೆ ನೀಡಿದ್ದ ಆದೇಶ ವಿಸ್ತರಣೆ

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಂತೆ ನೀಡಿದ್ದ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ.

ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಈ ಹಿಂದೆ ಬಿಎಸ್ ವೈ ಅವರನ್ನು ಬಂಧನ ಮಾಡದಂತೆ ಆದೇಶ ಹೊರಡಿಸಿತ್ತು.

ಇದೀಗ ಇದೇ ಪ್ರಕರಣ ಸಂಬಂಧ ಅರ್ಜಿ ವಿಚಾರಣೆಯನ್ನು ಮತ್ತೆ ಒಂದು ವಾರ ಕಾಲ ಮುಂದೂಡಿರುವ ಹೈಕೋರ್ಟ್, ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಿದ್ದ ಆದೇಶವನ್ನೂ ವಿಸ್ತರಣೆ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular