HomeKarnatakaGOOD NEWS: ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆ ವಯೋಮಿತಿ ಸಡಿಲಿಕೆ

GOOD NEWS: ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆ ವಯೋಮಿತಿ ಸಡಿಲಿಕೆ

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಹೆಚ್.ಕೆ.ಪಾಟೀಲ್, 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದರು.

ಅಲ್ಲದೇ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಲವು ವರ್ಷಗಳಿಂದ ಖಾಲಿಯಿರುವ ಗೆಜೆಟೆಡ್ ಪ್ರೊಬೇಷನರಿ ಹುದ್ದೆ ಭರ್ತಿ ಆಗಿರಲಿಲ್ಲ. ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಂದ ನೇಮಕಾತಿ ವಿಳಂಬವಾಗಿತ್ತು. ಈಬಾರಿ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿಯಲ್ಲಿ ಗರಿಷ್ಠ 3 ವರ್ಷ ವಯೋಮಿತಿ ಸಡಿಲಗೊಳಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular