
ಬೆಂಗಳೂರು: ವಸತಿ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಫಲಾನುಭವಿಗಳ ಪಾಲಿನ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ.
ವಸತಿ ಸಚಿವ ಜಮೀರ್ ಅಹಮದ್ ಖಾನ್ ಈ ಬಗ್ಗೆ ಮಾಹಿತಿ ನೀಡಿದ್ದು, ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಅಡಿ ಆಯ್ಕೆಯಾದ 12,153 ಕುಟುಂಬಗಳು ಕಟ್ಟಬೇಕಿದ್ದ ತಲಾ 1 ಲಕ್ಷ ರೂ. ವಂತಿಗೆಯನ್ನು ಸರ್ಕಾರವೇ ಭರಿಸಲಿದೆ. ಸಿಎಂ ಸಿದ್ದರಾಮಯ್ಯ ಅವರು ಫಲಾನುಭವಿಗಳ ವಂತಿಕೆಯ ಒಟ್ಟು 121.53 ಕೋಟಿ ರೂ. ಬಿಡುಗಡೆ ಮಾಡಲು ಸಮ್ಮತಿಸಿದ್ದಾರೆ ಎಂದು ತಿಳಿಸಿದ್ದಾರೆ.
