HomeKarnatakaಒಳಹರಿವು ಹೆಚ್ಚಿದ ಹಿನ್ನಲೆ ಭದ್ರಾ ಜಲಾಶಯದಿಂದ ಯಾವುದೇ ಕ್ಷಣ ನೀರು ಹೊರಕ್ಕೆ

ಒಳಹರಿವು ಹೆಚ್ಚಿದ ಹಿನ್ನಲೆ ಭದ್ರಾ ಜಲಾಶಯದಿಂದ ಯಾವುದೇ ಕ್ಷಣ ನೀರು ಹೊರಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿರುವ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಅಲರ್ಟ್ ನೀಡಲಾಗಿದೆ.

ಯಾವುದೇ ಸಂದರ್ಭದಲ್ಲಿ ಡ್ಯಾಂ ನಿಂದ ನೀರು ಬಿಡುವ ಸಾಧ್ಯತೆ ಇದೆ. ಎಚ್ಚರದಿಂದ ಇರುವಂತೆ ನದಿ ಪಾತ್ರದ ಜನರಿಗೆ ಸೂಚನೆ ನೀಡಲಾಗಿದೆ. ಜಲಾಶಯದಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.

ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ, ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದೆ. ದಿನಾಂಕ:26.07.2024 ರಂದು ಜಲಾಶಯದ ನೀರಿನ ಮಟ್ಟ 174 ಆಡಿ 3 ಇಂಚುಗಳಿಗೆ ತಲುಪಿರುತ್ತದೆ. ಹರಿದು ಬರುವ ಒಳಹರಿವಿನ ಪ್ರಮಾಣ 35000-40000 ಕ್ಯೂಸೆಕ್ಸ್ ಇದ್ದು. ಇದೇ ರೀತಿ ಮುಂದುವರೆದಲ್ಲಿ ಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟಕ್ಕೆ ಅತೀ ಶೀಘ್ರವಾಗಿ ಭರ್ತಿಯಾಗುವ ಸಂಭವವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಣೆಕಟ್ಟು ಸುರಕ್ಷತೆಯಿಂದ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ಒಳ ಹರಿವಿನ ಪ್ರಮಾಣಕ್ಕೆ ಅನುಗುಣವಾಗಿ Spill Way Gate ಮುಖಾಂತರ ನದಿಗೆ ಬಿಡಲಾಗುವುದು. ಭದ್ರಾ ನದಿಯ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕಾಗಿ ಈ ಮೂಲಕ ಕೋರಲಾಗಿದೆ. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular