ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರಿಗೆ ಕುರಿ ಮಾಂಸದ ಬದಲು ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂದು ವ್ಯಾಪಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರೈಲಿನ ಮೂಲಕ ರಾಜಸ್ಥಾನದಿಂದ ಬೆಂಗಳೂರಿಗೆ ತರಲಾಗಿದ್ದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆಹಾರ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಮಾಂಸ ಕುರಿಯದೆ ಅಥವಾ ನಾಯಿಯದೆ ಎಂಬುದನ್ನು ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ರಾಜಸ್ಥಾನದಿಂದ 90 ಬಾಕ್ಸ್ ಗಳಲ್ಲಿ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಮಾಂಸ ತರಲಾಗಿದೆ. ಈ ಬಗ್ಗೆ ಅನುಮಾನಗೊಂಡ ಹಿಂದೂ ಪರ ಸಂಘಟನೆಗಳು ದಾಳಿ ನಡೆಸಿದ್ದು, ಈ ಮಾಂಸ ನಾಯಿ ಮಾಂಸವಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಉದ್ಯಮಿ ಅಬ್ದುಲ್ ರಜಾಕ್ ಬಾಕ್ಸ್ ಗಳಲ್ಲಿ ಇದ್ದ ಮಾಂಸ ಪರಿಶೀಲನೆಗೆ ಅವಕಾಶ ನೀಡದೆ ಇದ್ದಾಗ ಮಾತಿನ ಚಕಮಕಿ ನಡೆದು ಕೊನೆಗೆ ಪರಿಶೀಲಿಸಿದಾಗ ನಾಯಿ ಮಾಂಸ ಪತ್ತೆಯಾಗಿದೆ. ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಮಾಂಸವನ್ನು ಪರೀಕ್ಷೆಗೆ ಒಳಪಡಿಸಲು ಆಹಾರ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.